ಬೆಳ್ತಂಗಡಿ : ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿಯಿಂದ ಇಂದಿನ ಕಾರ್ಯಾಚರಣೆ ಅಂತ್ಯ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯ ಮಾಡಿದ್ದಾರೆ. ನಾಳೆ ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.
ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ ನದಿಯ ಪಕ್ಕದಲ್ಲೇ ಇದೆ. ನದಿಗೂ ಈ ಜಾಗಕ್ಕೂ 10 ಮೀಟರ್ ಅಂತರವೂ ಇಲ್ಲ. ಇಲ್ಲಿ ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯುವ ಕಾರ್ಯ ಮುಂದುವರಿಸಲು ಎಸ್ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಸಾಕ್ಷಿ ದೂರುದಾರ ಮೊದಲು ತೋರಿಸಿದ ಜಾಗದಲ್ಲಿ ಅಗೆಯುವ ಕಾರ್ಯವನ್ನು ಮಧ್ಯಾಹ್ನ 12 ಗಂಟೆ ಸುಮಾರಿಗೆ ಆರಂಭಿಸಲಾಗಿತ್ತು.
‘ಸುಮಾರು 3 ಅಡಿ ಆಳದವರೆಗೆ ಅಗೆಯಲಾಗಿದೆ. ಮೃತದೇಹದ ಕುರುಹುಗಳು ಇದುವರೆಗೂ ಸಿಕ್ಕಿಲ್ಲ. ಮಣ್ಣು ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿ ತರಿಸಿ ಅಗೆಯುವ ಕಾರ್ಯ ಮುಂದುವರಿಸಲಾಗುತ್ತದೆ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
‘ಸಾಕ್ಷಿ ದೂರುದಾರನಿಗೆ ತೃಪ್ತಿಯಾಗುವವರೆಗೆ ಹಾಗೂ ನಮಗೂ ಇನ್ನು ಅಗೆಯುವ ಅಗತ್ಯವಿಲ್ಲ ಎಂದು ನಮಗೂ ಮನವರಿಕೆ ಆಗುವವರೆಗೆ ಅಗೆಯುವ ಕಾರ್ಯ ಮುಂದುವರಿಸಲಿದ್ದೇವೆ. ಸದ್ಯಕ್ಕೆ ಒಂದೇ ಜಾಗವನ್ನು ಅಗೆದಿದ್ದೇವೆ. ಇದು ಪೂರ್ಣಗೊಂಡ ಬಳಿಕವೇ ಬೇರೆ ಜಾಗದಲ್ಲಿ ಅಗೆಯುವ ಕಾರ್ಯ ಆರಂಭಿಸಲಿದ್ದೇವೆ’ ಎಂದು ಎಸ್ಐಟಿಯ ಡಿಐಜಿ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0



