24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

Aug 6, 2025 - 12:14
24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌  ಟ್ರಂಪ್‌

ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಖರೀದಿ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಕ್ಸಮರ ತೀವ್ರ ಜೋರಾಗುತ್ತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಭಾರತದ ಆಮದುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಕಳೆದ 2 ದಿನಗಳಲ್ಲಿ 2ನೇ ಬಾರಿಗೆ ಟ್ರಂಪ್‌ ನೀಡಿದ ಬೆದರಿಕೆಯಾಗಿದೆ.

ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು ಗಣನೀಯವಾಗಿ ಏರಿಕೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0