ಮಂಗಳೂರು: ಪೊಲೀಸ್ ರಕ್ಷಣೆ ಕೋರಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮನವಿ

Aug 12, 2025 - 11:19
ಮಂಗಳೂರು: ಪೊಲೀಸ್ ರಕ್ಷಣೆ ಕೋರಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮನವಿ

ಮಂಗಳೂರು: ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್‌ನಿಂದ ಅತ್ಯಾಚಾರಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿರುವ ಸಂತ್ರಸ್ತೆ, ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಪೊಲೀಸ್ ರಕ್ಷಣೆ ನೀಡುವಂತೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಸಂತ್ರಸ್ತೆ ತನ್ನ ಮಗು, ತಾಯಿ, ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಡಿ ಹಾಗೂ ಇತರ ಮುಖಂಡರೊಂದಿಗೆ ಐಜಿಪಿ ಕಚೇರಿಗೆ ಭೇಟಿ ನೀಡಿ ಈ ಮನವಿ ಸಲ್ಲಿಸಿದರು. ಇತ್ತೀಚೆಗೆ ತಮ್ಮ ಮನೆಯ ಸುತ್ತ ರಾತ್ರಿ ವೇಳೆ ಅಪರಿಚಿತ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದು, ಇದರಿಂದ ಭಯದ ವಾತಾವರಣ ಉಂಟಾಗಿದೆ. ತನ್ನ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಬೇಕೆಂದು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0