ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಎಪಿ
ನವದೆಹಲಿ: ಸಂಸತ್ ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಎಎಪಿ ನಾಯಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಸೂದೆಯು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಅನಿಯಂತ್ರಿತ ಕಾರ್ಯಾಂಗ ಹಸ್ತಕ್ಷೇಪಕ್ಕೆ ಅನುವು ಮಾಡಿಕೊಡುತ್ತದೆ. ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸಲು ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರ ಹಕ್ಕುಗಳನ್ನು ಈ ಮಸೂದೆಯು ಕಿತ್ತುಕೊಳ್ಳುತ್ತದೆ ಎಂಬ ಆರೋಪಗಳನ್ನು ಅಲ್ಲಗಳೆದಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



