ಬೆಂಗಳೂರು ಅಗ್ನಿ ದುರಂತದಲ್ಲಿ ಐದು ಮಂದಿ ಸಾವು: 5 ಲಕ್ಷ ವೈಯಕ್ತಿಕ ಪರಿಹಾರ ಘೋಷಿಸಿದ ಸಚಿವ ಝಮೀರ್
ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಹಾಗೂ ನಮ್ಮ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಜಮೀರ್ ಅಹ್ಮಮದ್ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಇದು ವೈಯಕ್ತಿಕ ಪರಿಹಾರವಾಗಿದ್ದು ಸರ್ಕಾರದಿಂದಲೂ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
What's Your Reaction?
Like
0
Dislike
0
Love
1
Funny
0
Angry
0
Sad
0
Wow
0



