ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಮೇಘಸ್ಫೋಟ: 7 ಜನರು ಸಾವು, ಭರದಿಂದ ಸಾಗಿದ ರಕ್ಷಣಾ ಕಾರ್ಯ
ಜಮ್ಮುಕಾಶ್ಮೀರ: ಆಗಸ್ಟ್ 14ರಂದು ಉಂಟಾದ ದುರಂತದಿಂದ ಕಿಶ್ತ್ವಾರ್ ಜಿಲ್ಲೆಯು ಹೊರಬರುವ ಮುನ್ನವೇ, ಇದೀಗ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ಮತ್ತೊಂದು ಮೇಘಸ್ಫೋಟ ಸಂಭವಿಸಿದೆ. ದುರಂತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ರಾಜ್‌ಬಾಗ್‌ನ ಜೋಡ್ ಘಾಟಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಅಲ್ಲಿಗೆ ಸಂಪರ್ಕ ಕಡಿತಗೊಂಡಿದೆ. ಭೂಮಿ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇಲ್ಲಿಯವರೆಗೆ, ಏಳು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಆರು ಮಂದಿಯನ್ನು ರಕ್ಷಿಸಿ, ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಜಂಟಿ ತಂಡ ಸ್ಥಳಕ್ಕೆ ತಲುಪಿದ್ದು, ಸ್ಥಳೀಯರ ಜೊತೆಗೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್ ಮತ್ತು ಚಾಂಗ್ಡಾ ಗ್ರಾಮಗಳು ಹಾಗೂ ಲಖನ್ಪುರ ಪೊಲೀಸ್ ಠಾಣೆ ಪ್ರದೇಶದ ದಿಲ್ವಾನ್- ಹುಟ್ಲಿಯಲ್ಲಿಯೂ ಭೂಕುಸಿತ ಸಂಭವಿಸಿದೆ. ಆದರೆ ಯಾವುದೇ ದೊಡ್ಡ ಹಾನಿ ಉಂಟಾಗಿರುವ ವರದಿಯಾಗಿಲ್ಲ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



