ಆನ್‌ಲೈನ್ ಗೇಮಿಂಗ್ ನಿಷೇಧ: BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11
ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 ಬಿಸಿಸಿಐ ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ.
ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಾಯೋಜಕತ್ವ ವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸೆ.9ರಿಂದ ಆರಂಭವಾಗಲಿರುವ ಏಷ್ಯಾಕಪ್‌ಗೆ ಬೇರೆ ಹೊಸ ಪ್ರಾಯೋಜಕರ ಅವಶ್ಯತತೆಯಿದೆ.
18 ವರ್ಷಗಳ ಹಿಂದೆ ಆರಂಭವಾಗಿದ್ದ ಡ್ರೀಮ್11 ಸಂಸ್ಥೆ 2023ರ ಜುಲೈನಲ್ಲಿ ಬಿಸಿಸಿಐ ಪ್ರಾಯೋಜಕತ್ವವನ್ನು 3 ವರ್ಷದ ಅವಧಿಗೆ ಬರೋಬ್ಬರಿ 358 ಕೋಟಿ ರೂ.ಗೆ ಪಡೆದುಕೊಂಡಿತ್ತು. ಒಪ್ಪಂದದ ಅವಧಿ ಮುಂಬರುವ 2026ರ ಜುಲೈ ತಿಂಗಳವರೆಗೆ ಇದ್ದರೂ ಕೂಡ 1 ವರ್ಷಕ್ಕೂ ಮುಂಚೆ ಸಂಸ್ಥೆ ಪ್ರಾಯೋಜಕತ್ವವನ್ನು ತೊರೆದಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



