ಸರ್ಚ್ ವಾರಂಟ್ ಪಡೆದು ದೂರುದಾರನೊಂದಿಗೆ ಮಹೇಶ್ ತಿಮರೋಡಿ ನಿವಾಸಕ್ಕೆ ಬಂದ SIT ತಂಡ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ.
ಎಸ್ ಐಟಿ ಬಂಧನದಲ್ಲಿರುವ ಸಿ ಎನ್ ಚಿನ್ನಯ್ಯ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು, ಅದರಂತೆ ಎಸ್.ಐ.ಟಿ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ತಿಮರೋಡಿ ಮತ್ತು ಅವರ ಸಹೋದರನ ಮನೆಗೆ ತೆರಳಿದ್ದಾರೆ.
ತಿಮರೋಡಿಯವರ ಬಳಿ ಇರುವ ಮೊಬೈಲ್ ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇದೆ ಎಂದು ಚಿನ್ನಯ್ಯ ಹೇಳಿದ್ದು ಈ ಸಂಬಂಧ ಮನೆಯಿಡೀ ಎಸ್ ಐಟಿ ತಂಡ ಶೋಧ ನಡೆಸುತ್ತಿದೆ. ಬೆಳ್ತಂಗಡಿ ನ್ಯಾಯಾಧೀಶರಿಂದ ಸರ್ಚ್ ವಾರೆಂಟ್ ಪಡೆದುಕೊಂಡಿರುವ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಜೊತೆಯಲ್ಲಿ ಕರೆದುಕೊಂಡು ಬೆಳ್ತಂಗಡಿಯ ಉಜಿರೆಯಲ್ಲಿರುವ ತಿಮರೋಡಿ ಮನೆಗೆ ತೆರಳಿದ್ದು, ಮಹಜರು ನಡೆಸುತ್ತಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



